

ತುಮಕೂರು: ಇನ್ಮುಂದೆ ಯಾವುದೇ ಚುನಾವಣೆಯಲ್ಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಸಂಸದ ಜಿ.ಎಸ್.ಬಸವರಾಜು ಘೋಷಿಸಿದ್ದಾರೆ.
ತಿಪಟೂರಿನಲ್ಲಿ ಶ್ರೀ ಗುರುಸಿದ್ದರಾಮೇಶ್ವರ 850ನೇ ಜಯಂತಿ ಉತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವರಾಜು, ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ. ನಿಮ್ಮ ಜತೆ ನೀರಾವರಿ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಇರುವೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಮುಂದೆಯೇ ಬಸವರಾಜು ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ವಿರುದ್ಧ ಬಸವರಾಜು ಗೆದ್ದಿದ್ದರು. ಇನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡರಿಗೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ರೆ ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಎಸ್ಪಿಎಂ ಆಗ್ತಾರೆ ಎಂಬ ಚರ್ಚೆ ನಡೆಯುತ್ತಿದೆ.