ಉಚಿತ ಅಕ್ಕಿ ಪಡೆದ ರೈತರು ಸೋಮಾರಿಗಳಾದರು: ಸಂಸದ ಜಿಎಸ್ ಬಿ

DSC_8044
Published on

ತುಮಕೂರು: ರೈತರಿಗೆ ಸರ್ಕಾರ ಉಚಿತ ಅಕ್ಕಿ ಸೇರಿದಂತೆ ವಿವಿಧ ಸೌಲಭ್ಯ ನೀಡುತ್ತಿರುವ ಹಿನ್ನೆಲೆಯಲ್ಲಿ ಹೊಲ ಗದ್ದೆಗಳಲ್ಲಿ ಕೆಲಸ ಮಾಡುವುದನ್ನೇ ಮರೆತಿದ್ದಾರೆ, ಸರ್ಕಾರವೇ ರೈತರನ್ನು ಸೋಮಾರಿಗಳನ್ನಾಗಿ ಮಾಡುತ್ತಿದೆ ಎಂದು ಸಂಸದ ಜಿ.ಎಸ.ಬಸವರಾಜು ಅಭಿಪ್ರಾಯಪಟ್ಟರು.

ತಾಲೂಕಿನ ಹಿರೇಹಳ್ಳಿ ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಇಂದು ಆಯೋಜಿಸಿದ್ದ ಕೃಷಿ ಸನ್ಮಾನ್ ಯೋಜನೆಯ ಕೃಷಿ ಸನ್ಮಾನ ನಿಧಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿ, ರೈತರಿಗೆ ದುಡಿದು ತಿನ್ನುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ ಎಂದರು.

ಸರ್ಕಾರ ಸಾವಿರಾರು ಕೋಟಿ ರೂ. ಹಣ ಖರ್ಚು ಮಾಡಿ ಡ್ಯಾಂ ಕಟ್ಟಿ, ನೂರಾರು ಕಿಮೀ ದೂರದಿಂದ ನಾಲೆಗೆ ತಂದು ಕೆರೆಗಳಿಗೆ ನೀರು ತುಂಬಿಸಿದರೆ ರೈತರು ಸರ್ಕಾರದ ಉಚಿತ ಅಕ್ಕಿ ಪಡೆದು ಬೆಳೆಯುವುದನ್ನೇ ಮರೆಯುತ್ತಿದ್ದಾರೆ ಎಂದರು.

ಕೃಷಿ ಜಂಟಿ ನಿರ್ದೇಶಕ ಕೆ.ಎಚ್.ರವಿ ಮಾತನಾಡಿ, ಪಿಎಂ ಕಿಸಾನ್ ಯೋಜನೆಯಲ್ಲಿ ರೈತರು ಕೃಷಿ ಕಾಲದಲ್ಲಿ ಕೃಷಿಗೆ ಪೂರಕವಾದ ಬೀಜ, ರಸಗೊಬ್ಬರ,ಇನ್ನಿತರ ಪರಿಕರಗಳನ್ನು ಕೊಳ್ಳಲು ಅನುಕೂಲ ಮಾಡುತ್ತಿದೆ ಎಂದರು.
ಹಿರೇಹಳ್ಳಿ ಕೃಷಿ ವಿಜ್ಞಾನಕೇಂದ್ರದ ಮುಖ್ಯಸ್ಥ ಡಾ.ಲೋಗಾನಂದನ್, ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಉಪ ಕೃಷಿ ನಿರ್ದೇಶಕ ಟಿ.ಎನ್.ಅಶೋಕ್, ಜಿ.ದೀಪಶ್ರೀ, ಕೃಷಿ ವಿಜ್ಞಾನಿ ಡಾ.ಜಗದೀಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net