ಕಣದಿಂದ ನಿವೃತ್ತಿ ಘೋಷಿಸಿ ಬಿಜೆಪಿ ಬೆಂಬಲಿಸಿದ ನರಸೇಗೌಡ

08Tmk_Independent_BJP_01
Published on

ತುಮಕೂರು: ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ವಿರುದ್ಧ ಬಂಡೆದ್ದು ಸ್ವತಂತ್ರವಾಗಿ ಸ್ಪರ್ಧಿಸಿದ್ದ ನರಸೇಗೌಡ ಚುನಾವಣಾ ಕಣದಿಂದ ನಿವೃತ್ತಿಹೊಂದಿದ್ದಾರೆ. ಬಿಜೆಪಿ ಅಭ್ಯರ್ಥಿ, ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌ಗೆ ಬೆಂಬಲ ಸೂಚಿಸಿ ಕೇಸರಿ ಪಡೆ ಸೇರಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಎಸ್.ರವಿಶಂಕರ್, ಸಂಸದ ಜಿ.ಎಸ್.ಬಸವರಾಜು, ವಿಧಾನಪರಿಷತ್ ಸದಸ್ಯ ಚಿದಾನಂದ ಗೌಡ, ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ಶಿವಪ್ರಸಾದ್ ಮತ್ತಿತರರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷ ಸಿದ್ಧಾಂತ, ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಆಡಳಿತ ಮೆಚ್ಚಿ ಹಾಗೂ ನಗರ ಬಿಜೆಪಿ ಅಭ್ಯರ್ಥಿ ಜಿ.ಬಿ.ಜ್ಯೋತಿಗಣೇಶ್ ಸರಳತೆ-ಸಜ್ಜನಿಕೆ, ಆಡಳಿತ ವೈಖರಿಗೆ ಮೆಚ್ಚಿ ನಾನು ಪಕ್ಷೇತರ ಅಭ್ಯರ್ಥಿಯಿಂದ ಕಣದಿಂದ ನಿವೃತ್ತಿ ಹೊಂದಿ ಅವರನ್ನು ಬೆಂಬಲಿಸುತ್ತಿz್ದೆÃನೆ. ಬಿಜೆಪಿ ಗೆಲುವಿಗೆ ನಾವೇಲ್ಲರೂ ಶ್ರಮಿಸೋಣ ಎಂದರು.

ಪಕ್ಷದ ಸಿದ್ಧಾಂತ, ಪ್ರಧಾನಿ ಮೋದಿ ಕಾರ್ಯವೈಖರಿಗೆ ಮನಸೋತು ನರಸೇಗೌಡರು ಬಿಜೆಪಿ ಸೇರಿದ್ದು ಅವರನ್ನು ಹೃತ್ಪೂರ್ವಕವಾಗಿ ಬರಮಾಡಿಕೊಳ್ಳಲಾಗಿದೆ. ಸಂಘಟನೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಈ ಬಾರಿ ಮತ್ತೊಮ್ಮೆ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಜ್ಯೋತಿಗಣೇಶ್ ಗೆಲುವು ನಿಶ್ಚಿತ ಎಂದು ಬಿಜೆಪಿ ಜಿಲ್ಯಾಧ್ಯಕ್ಷ ಎಚ್.ಎಸ್.ರವಿಶಂಕರ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net