

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲಿಯೇ ಉರುಳಿಬಿದ್ದಿರುವ ಘಟನೆ ಬುಧವಾರ ಮಧ್ಯಾಹ್ನ ಕ್ಯಾತಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ದೇವರ ಹೊಸಹಳ್ಳಿ ಸೇತುವೆ ಬಳಿ ನಡೆದಿದೆ.
ಘಟನೆಯಲ್ಲಿ 10 ಜನರಿಗೆ ಸಣ್ಣ, ಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ಪೊಲೀಸ್ ಜೀಪು ಹಾಗೂ ಆಂಬುಲೆನ್ಸ್ ಸಹಾಯದಿಂದ ಕಳುಹಿಸಲಗಿದ್ದು ಅದೃಷ್ಟವಶಾತ್ ಎಲ್ಲರೂ ಆರೋಗ್ಯದಿಂದ್ದಾರೆ.
ಬೆಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ರಸ್ತೆಯಲ್ಲಿ ಬಸ್ ಬಿದ್ದಿದ್ದರಿಂದ ಅದನ್ನು ನೋಡಲು ಜನರು ಸೇರಿದ್ದು ಹಾಗೂ ವಾಹನಗಳು ನಿಧಾನವಾಗಿ ಚಲಿಸಿದ್ದರಿಂದ ಕ್ಯಾತಸಂದ್ರ ಟೋಲ್‌ನಿಂದ ನಂದಿಹಳ್ಳಿವರೆಗೂ ಸಂಚಾರ ದಟ್ಟಣೆ ಉಂಟಾಗಿತ್ತು.
ನೂರಾರು ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಟೆಗೂ ಹೆಚ್ಚು ಕಾಲ ನಿಂತು ಚಲಿಸುವಂತಾಗಿತ್ತು, ವಾಹನಗಳನ್ನು ಮುಂದೆ ಕಳುಹಿಸಲು ಪೊಲೀಸರು ಹರಸಾಹಸಪಟ್ಟರು.