ಡಾ.ಜಿ.ಪರಮೇಶ್ವರ್ ಪ್ರತಿಗ್ರಾಮದ ಮನೆಮನೆಗೂ ಭೇಟಿ

17
Published on

ಕೊರಟಗೆರೆ: ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಮುಂದುವರಿಸಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಜಿ.ಪರಮೇಶ್ವರ್ ಪ್ರತಿಗ್ರಾಮದ ಮನೆಮನೆಗೂ ಭೇಟಿ ನೀಡಿ ಮತದಾರರನ್ನು ಸೂಜಿಗಲ್ಲಿನಂತೆ ಸೆಳೆಯಲಾರಂಭಿಸಿದ್ದಾರೆ.

ಶುಕ್ರವಾರ ತಾಲೂಕಿನಲ್ಲಿ ಓಬಳಾಪುರ ಗ್ರಾಪಂ ವ್ಯಾಪ್ತಿಯಿಂದ ಆರಂಭಗೊAಡ ಪ್ರಚಾರ ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿ ಘೋಷಿಸಿದ್ದು ಜನರು ಆಶಿರ್ವಾದ ಮಾಡಬೇಕು ಎಂದರು.

ಬಿಜೆಪಿ 40 ಪರ್ಸೆಂಟ್ ಲಂಚವನ್ನು ಕಡಿಮೆ ಮಾಡಿದ್ದರೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕಡಿಮೆ ಮಾಡುವ ಅಗತ್ಯ ಬರುತ್ತಿರಲಿಲ್ಲ, ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬರಲಿದೆ, ಬಡವರಿಗೆ 10 ಕೆಜಿ ಅಕ್ಕಿ ಕೊಡುತ್ತೇವೆ, ರೈತರ ಸಾಲಮನ್ನಾ ಮಾಡಲು ಆಗದ ಬಿಜೆಪಿ ಉದ್ಯಮಿಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ ಎಂದರು.

ಶ್ರೀಮAತರ ಪರ ಇರುವ ಬಿಜೆಪಿ, ರೈತರ ಸಾಲ ಮನ್ನಾ ಮಾಡಿದರೆ ದೇಶ ದಿವಾಳಿಯಾಗಲಿದೆ ಎನ್ನುವ ಮನೋಭಾವನೆ ಇರುವವರಿಗೆ ಅಧಿಕಾರ ಕೊಡಬೇಕೆ ಎಂಬುದನ್ನು ಜನರು ಯೋಚಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ 13500 ಕೋಟಿ ರೂ. ವೆಚ್ಚದಲ್ಲಿ ಎತ್ತಿನಹೊಳೆ ಯೋಜನೆ ಜಾರಿಗೆ ಮುಂದಾಗಿತ್ತು. ಆದರೆ, ಈ ಯೋಜನೆ ಇಂದು 21 ಸಾವಿರ ಕೋಟಿ ತಲುಪಿದೆ. ಬೊಮ್ಮಾಯಿ ನೇತೃತ್ವದ ಸರ್ಕಾರ ಎತ್ತಿನ ಹೊಳೆ ಯೋಜನೆಗೆ ಅನುದಾನವನ್ನು ನೀಡಲಿಲ್ಲ ಮತ್ತು ಬಜೆಟ್ ನಲ್ಲಿ ಅನುದಾನವನ್ನು ನೀಡಲಿಲ್ಲ. ಎತ್ತಿನಹೊಳೆ ಯೋಜನೆ ಪೂರ್ಣಗೊಂಡರೆ ಕೊರಟಗೆರೆಯ 109 ಕೆರೆಗಳು ತುಂಬಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net