ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾ ಶ್ರೀಗಳ ಹೆಸರು ಸಿಎಂ ಜತೆ ಚರ್ಚಿಸಿ ಆದೇಶ

Param_Swamiji
Published on

ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರಿಡುವ ಪ್ರಸ್ತಾವನೆ ಸರ್ಕಾರಕ್ಕೆ ಬಂದಿದ್ದು ಈ ಬಗ್ಗೆ ಸಿಎಂ ಜತೆಗೆ ಚರ್ಚಿಸಿ, ಅವರ ಒಪ್ಪಿಗೆ ಪಡೆದು ಶೀಘ್ರದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು‌.

ಸಿದ್ದಗಂಗಾ ಮಠಕ್ಕೆ ಗುರುವಾರ ಬೆಳಗ್ಗೆ ಭೇಟಿ ನೀಡಿ ಮಠಾಧ್ಯಕ್ಷ ಸಿದ್ಧಲಿಂಗ ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ತುಮಕೂರು ರೈಲ್ವೇ ನಿಲ್ದಾಣ ಸ್ವಾಮೀಜಿ ಅವರ ಹೆಸರಿನಲ್ಲಿ ಶಾಶ್ವತವಾಗಿ ಇರುತ್ತದೆ. ಅದು‌ ನಾವು ಅವರಿಗೆ ಕೊಡುವ ಗೌರವ. ಈ ಬಗ್ಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸೋಮಣ್ಣ ಒತ್ತಾಯ ಮಾಡಿದ್ದರು. ಈಗಾಗಲೇ ರೈಲ್ವೆ ಇಲಾಖೆಯಿಂದ ಕೇಂದ್ರದಲ್ಲಿ ಮಂಜೂರು ಮಾಡಿಸಿದ್ದಾರೆ. ಶ್ರೀಗಳ ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತವೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದರು.

ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನಾಚರಣೆಗೆ ಬರಲು ಆಗಿರಲಿಲ್ಲ. ಇವತ್ತು ಸ್ವಾಮೀಜಿಗೆ ಗೌರವ ಸಮರ್ಪಣೆ ಮಾಡಲು ಬಂದಿದ್ದೇನೆ. ಸಿದ್ದಲಿಂಗಸ್ವಾಮೀಜಿಗೆ ನಮನ ಸಲ್ಲಿಸಿದ್ದೇನೆ. ನಮ್ಮ ಕುಟುಂಬಕ್ಕೂ ಮಠಕ್ಕೂ ಅವಿನಾಭವ ಸಂಬಂಧವಿದೆ. ನಮ್ಮ ತಂದೆ ಹಾಗೂ ಹಿರಿಯ ಸ್ವಾಮೀಜಿಯವರ ಜೊತೆಗೆ ಇದ್ದಂತಹ ಸಂಬಂಧ ಯಾವಾಗಲೂ ಇರುತ್ತದೆ. ಈ ಸಂಬಂಧವನ್ನು ನಾವು ಮುನ್ನಡೆಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

ಹೆಸರಿಡಲು ತಡವಾಗಿಲ್ಲ. ಸರ್ಕಾರದಲ್ಲಿ ಕೆಲವು ಪ್ರಕ್ರಿಯೆಗಳು ಇರುತ್ತದೆ. ರಸ್ತೆ, ವೃತ್ತ, ಕಟ್ಟಡಕ್ಕೆ ಹೆಸರಿಡಬೇಕಾದರೆ ಪ್ರಸ್ತಾವನೆಗಳು ಬಂದಾಗ ಪರಿಶೀಲನೆ ಮಾಡಿ, ಸಾಧಕ ಭಾದಕಗಳನ್ನ ನೋಡಿ ಸರ್ಕಾರ ಅನುಮತಿ ಕೊಡುತ್ತದೆ ಎಂದು ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net