ತುಮಕೂರಿನಲ್ಲಿ ಮುಂದವರಿದ ಅಪಘಾತಗಳ ಸರಣಿ; ಸೇತುವೆಯಿಂದ ಉರುಳಿದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವು

SIRA_Accident
Published on

ತುಮಕೂರು:ರಾಷ್ಟ್ರೀಯ ಹೆದ್ದಾರಿ 48ರ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಗೆ ಉರುಳಿಬಿದ್ದಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಉಳಿದಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಸಂಭವಿಸಿದೆ.

ಬೆಂಗಳೂರು ಮೂಲಕ ಎಲ್ಲರೂ ಸಿಂಧನೂರಿನಲ್ಲಿ ಸ್ನೇಹಿತನ ವಿವಾಹ ಮುಗಿಸಿಕೊಂಡು ವಾಪಸಾಗುತ್ತಿದ್ದರು ಎನ್ನಲಾಗಿದೆ. ಕಾರಿನಲ್ಲಿ ಚಾಲಕ ಸೇರಿ ಆರು ಜನರು ಪ್ರಯಾಣಿಸುತ್ತಿದ್ದರು. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬುಧವಾರ ಬೆಳಗ್ಗೆ ಗುಬ್ಬಿ ತಾಲೂಕು ಕೊಡ್ಲಿಕ್ರಾಸ್‌ನಲ್ಲಿ ಕಾರು, ಕ್ಯಾಂಟರ್ ಮುಖಾಮುಖಿಯಾಗಿ ನಾಲ್ವರು ಮೃತಪಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net