

ತುಮಕೂರು: ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಎತ್ತಿನಹೊಳೆ ಯೋಜನೆ ಜಾರಿಯಾಗಿದ್ದು ಭವಿಷ್ಯದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಎತ್ತಿನಹೊಳೆ ಯೋಜನೆ ವಲಯದ ಮುಖ್ಯ ಇಂಜಿನಿಯರ್ ಮಾಧವ ಅಭಿಪ್ರಾಯಪಟ್ಟರು.
ತುಮಕೂರು ವಿವಿ ಜಿ. ಎಸ್. ಪರಮಶಿವಯ್ಯ ಅಧ್ಯಯನ ಪೀಠ ಮತ್ತು ಅರ್ಥಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಇಂದು ಆಯೋಜಿಸಿದ್ದ `ಕರ್ನಾಟಕದಲ್ಲಿ ನೀರಾವರಿ ಯೋಜನೆಗಳು: ಅವಕಾಶಗಳು ಮತ್ತು ಸವಾಲುಗಳು' ವಿಷಯ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.
ರಾಜ್ಯದ ಜನರಿಗೆ ಮೂಲಭೂತ ಸೌಕರ್ಯಗಳಲ್ಲಿ ಒಂದಾದ ನೀರಿನ ಸಮಸ್ಯೆಯನ್ನು ಸಂಪೂರ್ಣವಾಗಿ ಬಗೆಹರಿಸುವುದು ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಅವರ ಕನಸಾಗಿತ್ತು, ಅವರ ಸಲಹೆಯಂತೆ ಎಲ್ಲರ ಒಳಿತಿಗಾಗಿ ಸಿದ್ಧವಾದ ಯೋಜನೆಯಿದು ಎಂದರು.
ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ಜಿ. ಎಸ್. ಪರಮಶಿವಯ್ಯ ಅಧ್ಯಯನ ಪೀಠದ ನಿರ್ದೇಶಕಿ ಡಾ. ಪಲ್ಲವಿ ಎಸ್.ಕುಸುಗಲ್ಲ, ಸ್ನಾತಕೋತ್ತರ ಅರ್ಥಶಾಸ್ತç ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಅಧ್ಯಕ್ಷ ಡಾ.ವಿಲಾಸ್ ಎಂ. ಕಾದ್ರೋಳಕರ, ಪ್ರೊ.ಬಿ.ರವೀಂದ್ರ ಕುಮಾರ್, ಸಹಾಯಕ ಪ್ರಾಧ್ಯಾಪಕ ಡಾ.ಎನ್.ಟಿ.ನೀಲಕಂಠ ಇದ್ದರು.