

ತುಮಕೂರು: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಜಿಲ್ಲೆಯಲ್ಲೇ ಪ್ರಥಮ ಪಿಯು ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಪರೀಕ್ಷೆಗೂ ಮುಂಚೆಯೇ ಪ್ರಶ್ನೆಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವ ಹಿನ್ನೆಲೆಯಲ್ಲಿ ಮಂಗಳವಾರದ ಪ್ರಥಮ ಪಿಯು ಇಂಗ್ಲೀಷ್ ಪರೀಕ್ಷೆಯನ್ನು ಮುಂದೂಡಲಾಗಿದೆ.
ಫೆ. 21 ರಂದು ನಡೆಯಬೇಕಿದ್ದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಆಂಗ್ಲ ಭಾಷೆ ವಿಷಯದ ಪರೀಕ್ಷೆಯನ್ನು ಮಾ.6ಕ್ಕೆ ಕಾರಣಾಂತರದಿAದ ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸೋಮವಾರ ಸಂಜೆ ಆದೇಶ ಹೊರಡಿಸಿದ್ದಾರೆ.
20ರಿಂದ ಆರಂಭ: ಪ್ರಥಮ ಪಿಯು ವಾರ್ಷಿಕ ಪರೀಕ್ಷೆ ಫೆ.20 ರಿಂದ ಆರಂಭವಾಗಿದ್ದು ಮಾ.4ರವರೆಗೆ ನಡೆಯಲಿವೆ. ಸೋಮವಾರ ಕನ್ನಡ ವಿಷಯ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು ಮಂಗಳವಾರದ ಇಂಗ್ಲೀಷ್ ವಿಷಯದ ಪ್ರಶ್ನೆ ಪತ್ರಿಕೆ ಬಹಿರಂಗಗೊAಡಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.
19 ನೋಡಲ್ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಲಾಗಿದ್ದು ಅಲ್ಲಿಂದ ಕಾಲೇಜುಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸುವ ಕೆಲಸ ಸಾಗಿತ್ತು. ಈ ಪ್ರಶ್ನೆಪತ್ರಿಕೆಗಳನ್ನು ಗೌಪ್ಯವಾಗಿರಿಸುವಂತೆ ಎಲ್ಲಾ ಕಾಲೇಜಿನ ಪ್ರಾಚಾರ್ಯರಿಗೆ ಪಿಯು ಉಪನಿರ್ದೇಶಕ ಗಂಗಾಧರ್ ಆದೇಶಿಸಿದ್ದಾರೆ.