ತುಮಕೂರು ದಸರಾಗೆ ಸಿಎಂಗೆ ಆಹ್ವಾನ

cm_dasara
Published on

ತುಮಕೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಅದ್ಧೂರಿಯಾಗಿ ಆಚರಿಸಲಾಗುತ್ತಿರುವ ತುಮಕೂರು ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲಾಯಿತು.

ಜಿಲ್ಲಾಧಿಕಾರಿ ಶುಭಕಲ್ಯಾಣ್​, ಜಿಪಂ ಸಿಇಒ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತ ಬಿ.ವಿ.ಆಶ್ವಿಜ ಮುಖ್ಯಮಂತ್ರಿಗಳ ಕಚೇರಿಗೆ ಮಂಗಳವಾರ ಭೇಟಿ ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ದಸರಾ ಉತ್ಸವದ ಅಂಗವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಅಮರ ಶಿಲ್ಪಿ ಜಕಣಾಚಾರಿ ಮುಖ್ಯ ವೇದಿಕೆಯಲ್ಲಿ ಅಕ್ಟೋಬರ್​ 11 ಮತ್ತು 12ರಂದು ಜರುಗುವ ಪ್ರಮುಖ ಕಾರ್ಯಕ್ರಮಗಳ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net