

ತುಮಕೂರು: ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಕ್ಯಾತಸಂದ್ರದ `ರಜತಾದ್ರಿ' ನಿವಾಸವು ಸೋಮವಾರ ಜಿಲ್ಲಾ ಕಾಂಗ್ರೆಸ್‌ನ ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿತ್ತು. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸ್ಕಿöçÃನಿಂಗ್ ಕಮಿಟಿ ಸದಸ್ಯ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಜಿಲ್ಲೆಯ ರಾಜಕೀಯ ಬೆಳವಣಿಗೆಗಳ ಕುರಿತು ಮಹತ್ವದ ಚರ್ಚೆಯು ನಡೆಯಿತು.
ಕಡುಭ್ರಷ್ಟ ಸರ್ಕಾರ: ಸಿಎಂ ಬಸವರಾಜ ಬೊಮ್ಮಾಯಿ ದೇಶ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ. 75 ವರ್ಷಗಳ ಇತಿಹಾಸದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಕಡುಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.