ನಾಲ್ಕು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಸೆರೆ

TIP_Crime
Published on

ತುಮಕೂರು: ತಿಪಟೂರಿನಲ್ಲಿ ಇತ್ತೀಚೆಗೆ ವರದಿಯಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ತಿಪಟೂರು ನಗರಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಇಬ್ಬರನ್ನು ಬಂಧಿಸಿ, ಮೂರು ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ವಶಪಡಿಸಿಕೊಂಡಿದ್ದಾರೆ.

ಗಾಂಧೀನಗರದ ಖಲಂದರ್(30) ಹಾಗೂ ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಮೊಹಮ್ಮದ್ ಖಲೀಂ(32) ಬಂಧಿತರು. ಪ್ರಕರಣದ ಮತ್ತೊಬ್ಬ ಆರೋಪಿ ಚಿಕ್ಕಮಗಳೂರು ತಾಲೂಕು ಸಿಂಗಟಗೆರೆಯ ಮಹಮ್ಮದ್ ರಫೀಕ್ ಎಂಬಾತ ತಲೆ ಮರೆಸಿಕೊಂಡಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net