

ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಕೆರೆಗೆ ಒಳಹರಿವು ಹೆಚ್ಚಾಗಿದ್ದು ಕೆರೆಯ ಅಂಗಳದಲ್ಲಿರುವ ಗುಡಿಸಲುಗಳು ಮುಳುಗಲಾರಂಭಿಸಿವೆ.
ಗುಡಿಸಲುಗಳು ನೀರಿನಲ್ಲಿ ಮುಳುಗಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳನ್ನು ಕಳೆದುಕೊಂಡು ನೆಲೆ ಇಲ್ಲದಂತಾಗಿರುವ ನಿವಾಸಿಗಳು ಆಶ್ರಯ ನೀಡುವಂತೆ ಹುಳಿಯಾರು ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗ ಧರಣಿ ಆರಂಭಿಸಿದ್ದಾರೆ.
ಸ್ಥಳೀಯ ಆಡಳಿತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಬಂದು ಸೂಕ್ತ ಪರಿಹಾರ ಒಗಿಸಬೇಕು ಎಂದು ಆಗ್ರಹಿಸಿದ್ದಾರೆ.