ತುಂಗಭದ್ರಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

DVG Tungabhadra Flood
Published on

ದಾವಣಗೆರೆ: ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ನೀರು ಬಿಟ್ಟಿರುವುದರಿಂದ ದಾವಣಗೆರೆ ಜಿಲ್ಲೆಯ ಹೊನ್ನಾಳಿ, ಹರಿಹರ, ಹರಪನಹಳ್ಳಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. 

ಹರಿಹರ ತಾಲೂಕಿನ ಪತ್ಯಾಪುರ - ಉಕ್ಕಡಗಾತ್ರಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹಲಸಬಾಳು ಗ್ರಾಮದ 15 ಎಕರೆ ಭತ್ತದ ಬೆಳೆ ಜಲಾವೃತವಾಗಿದೆ. ಸುಪ್ರಸಿದ್ಧ ಉಕ್ಕಡಗಾತ್ರಿ ಕರಿಬಸವೇಶ್ವರ ದೇವಸ್ಥಾನದ ಮೆಟ್ಟಿಲು, ಜವಳ ಮಂದಿರದ ವರೆಗೆ ನೀರು ಬಂದಿದೆ.

ಹೊನ್ನಾಳಿ ಪಟ್ಟಣದಲ್ಲಿ ನದಿ ಪಕ್ಕದ ಎರಡು ಕುಟುಂಬಗಳನ್ನು ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಹರಪನಹಳ್ಳಿ ತಾಲೂಕಿನಲ್ಲೂ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net