ಯೋಜನೆಗಳ ಸದ್ಬಳಕೆಗೆ ಸಲಹೆ

18 hrr
Published on

ಹರಿಹರ: ಸರ್ಕಾರ ಯೋಜನೆಗಳು ಅಭಿವೃದ್ಧಿಗೆ ಪೂರಕವಾಗಿರುತ್ತವೆ, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಬಿ.ಪಿ. ಹರೀಶ್ ಸಲಹೆ ನೀಡಿದರು.

ತಾಲೂಕಿನ ಕಡರನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗ್ರಾಮೀಣ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ರೂಪಿಸಿವೆ. ಅವುಗಳ ಮಾಹಿತಿಯನ್ನು ಪಡೆದು ಗ್ರಾಮದ ಅಭಿವೃದ್ಧಿಯ ಬಗ್ಗೆ ಚಿಂತನೆ ಮಾಡಿ ಎಂದರು.

ಪೂರ್ವ ಪ್ರಾಥಮಿಕದಿಂದ - ಉನ್ನತ ಶಿಕ್ಷಣದವರೆಗೂ ಅಗತ್ಯ ಸಲಕರಣೆಗಳ ಜತೆಗೆ ಉಚಿತ ಹಾಸ್ಟೆಲ್, ವಿದ್ಯಾರ್ಥಿ ವೇತನಗಳನ್ನು ನೀಡುವ ಮೂಲಕ ಶೈಕ್ಷಣಿಕವಾಗಿ ಪ್ರತಿಯೊಬ್ಬರೂ ಪ್ರಗತಿ ಸಾಧಿಸಲಿ ಎಂ ಸದುದ್ದೇಶದಿಂದ ಸರ್ಕಾರ ಯೋಜನೆಗಳನ್ನು ಜಾರಿ ಮಾದೆ ಎಂದು ತಿಳಿಸಿದರು.

ಕೆ.ಎನ್. ಹಳ್ಳಿ ಗ್ರಾಮದಲ್ಲಿ 17 ಲಕ್ಷ ರೂ. ವೆಚ್ಚದ ಗ್ರಂಥಾಲಯ, 12 ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡದ ಉದ್ಘಾಟನೆ ಹಾಗೂ 5 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಭೂಮಿಪೂಜೆ ಮಾಡಿದ್ದು ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.

ಇದೇ ವೇಳೆ ಕಡಾರನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ 17,80,000 ರೂ. ವೆಚ್ಚದಲ್ಲಿ ನಿರ್ವಿುಸಿದ ಸ್ವಚ್ಛ ಸಂಕೀರ್ಣ ಘಟಕ, 7,50,00 ರೂ. ವೆಚ್ಚದ ಶಾಲೆಯ ಹೈಟೆಕ್ ಅಡುಗೆಮನೆಯನ್ನು ಉದ್ಘಾಟಿಸಿದರು.

ಗ್ರಾಪಂ ಅಧ್ಯಕ್ಷೆ ಗಿರಿಜಮ್ಮ, ಉಪಾಧ್ಯಕ್ಷ ಪರಶುರಾಮ್ ಸದಸ್ಯರಾದ ವಿ. ಕುಬೇರಪ್ಪ, ಜಿ. ಲೋಕೇಶ್, ಎಚ್. ಬಸವನಗೌಡ, ರೇಖಮ್ಮ, ಜಿ. ಪುಷ್ಪಾ, ಹುಸೇನ್ ಸಾಬ್, ತಾಪಂ ಕಾರ್ಯನಿರ್ವಹಣಾಧಿಕಾರಿ ಸುಮಲತಾ, ಪಿಡಿಒ ಶಿಲ್ಪಾ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್, ಕಾರ್ಯದರ್ಶಿ ಹುಗ್ಗಿ ಮಹಾಂತೇಶ್, ಮಾಜಿ ಗ್ರಾಪಂ ಅಧ್ಯಕ್ಷ ಜಿ. ಮಂಜುನಾಥ್ ಮತ್ತು ಗ್ರಾಮಸ್ಥರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net