ಟಿಬಿಡ್ಯಾಂ ಒಳಹರಿವಿನಲ್ಲಿ ಹೆಚ್ವಳ

news
ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ
Published on

ಹೊಸಪೇಟೆ: ತುಂಗಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ತ್ರಿವಳಿ ರಾಜ್ಯಗಳ ಜೀವನಾಡಿ ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳ ಕಂಡಿದೆ. ಸದ್ಯ 2190 ಕ್ಯೂಸೆಕ್ ಒಳಹರಿವು ಹರಿದು ಬರುತ್ತಿದೆ.

ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಸೇರಿದಂತೆ ಜಲಾನಯನ ಪ್ರದೇಶದಲ್ಲಿ ಕೆಲದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ. 500 ರಿಂದ 600 ಕ್ಯೂಸೆಕ್‌ಗಿಂತ ಕಡಿಮೆ ಇದ್ದ ಒಳ ಹರಿವು ಶುಕ್ರವಾರ ದ್ವಿಗುಣಗೊಂಡಿದೆ. ಬೆಳಗ್ಗೆ ತುಂಗಭದ್ರಾ ಆಡಳಿತ ಮಂಡಳಿ ನೀಡಿದ ಮಾಹಿತಿ ಪ್ರಕಾರ 2190 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಸುರಿಯುತ್ತಿರುವ ಮಳೆಯಿಂದ ಒಳ ಹರಿವಿನ ಪ್ರಮಾಣದಲ್ಲಿ ಕೊಂಚ ಏರಿಕೆ ಕಂಡುಬAದಿದೆ. ಜಲಾಶಯದಲ್ಲಿ 1578.57 ಅಡಿಗೆ 3.817 ಟಿಎಂಸಿ ನೀರು ಸಂಗ್ರಹವಾಗಿದ್ದು ಅಚ್ಚುಕಟ್ಟು ಪ್ರದೇಶದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

ಜಲಾಶಯದಲ್ಲಿ ಕಳೆದ ಬಾರಿ ಇದೇ ದಿನಕ್ಕೆ ಜಲಾಶಯದಲ್ಲಿ1681.09 ಅಡಿಯಷ್ಟು ನೀರು ಸಂಗ್ರಹವಾಗಿ 5.024 ಟಿಎಂಸಿನಷ್ಟಿತ್ತು. ಕಳೆದ ಬಾರಿಗೆ ನೋಡಿದರೆ ಅಂದಾಜು 1.207 ಟಿಎಂಸಿ ನೀರು ಕಡಿತವಾಗಿದೆ. ಆದರೂ ಮಲೆನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಬಾರಿ ಜಲಾಶಯ ಸಂಪೂರ್ಣ ಭರ್ತಿಯಾಗಲಿದೆ ಎಂಬ ನಿರೀಕ್ಷೆ ರೈತರದ್ದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net