

ರಾಣೆಬೆನ್ನೂರ: ತುಂಗಭದ್ರಾ ನದಿ ನೀರಿನಲ್ಲಿ ಸ್ನಾನ ಮಾಡಲು ಹೋದ ಕೋರಿಯರ್ ಬಾಯ್ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಉದಗಟ್ಟಿ ಗ್ರಾಮದ ಬಳಿ ಗುರುವಾರ ನಡೆದಿದೆ.
ದಾವಣಗೆರೆ ತಾಲೂಕಿನ ನೀಟವಳ್ಳಿ ಗ್ರಾಮದ ರುದ್ರೇಶ ತಿಮ್ಮೇಶ (24) ಮೃತ ಯುವಕ.
ಈತ ಸ್ನಾನ ಮಾಡುವ ಸಲುವಾಗಿ ತುಂಗಭದ್ರಾ ನದಿಗೆ ಇಳಿದಾಗ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.