ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದ ವ್ಯಕ್ತಿ ಶವವಾಗಿ ಪತ್ತೆ

24-RNR-06 Manjunath Aanandi
Published on

ರಾಣೆಬೆನ್ನೂರ: ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ಗ್ರಾಮದ ಮಂಜುನಾಥ ಬಸವರಾಜ ಆನಂದಿ (27) ಮೃತ ವ್ಯಕ್ತಿ.
ಈತ ತುಂಗಭದ್ರಾ ನದಿ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಆತ ಮೃತದೇಹ ಹರಿಹರ ಬಳಿಯ ಸೇತುವೆ ಬಳಿ ದೊರೆತಿದೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net