ತುಂಗಭದ್ರಾ ನದಿ ನೀರಿನಲ್ಲಿ ಮುಳಗಿ ವ್ಯಕ್ತಿ ಸಾವು

Crime Logo
Published on

ರಾಣೆಬೆನ್ನೂರ: ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕಕುರುವತ್ತಿ ಗ್ರಾಮದ ಬಳಿ ಸೋಮವಾರ ನಡೆದಿದೆ.
ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ಪಿ. ಚಂದ್ರಶೇಖರಗೌಡ ಭರಮಗೌಡ್ರ (32) ಮೃತ ವ್ಯಕ್ತಿ.
ಈತ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಲು ಹೋದಾಗ ನೀರಿನಲ್ಲಿ ಮುಳಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net