ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಮಾರ್ಚ್ 31 ರವರೆಗೆ ಕಾಲಾವಧಿ ವಿಸ್ತರಣೆ

28102022 koppal FOUZIA TARNUM zp ceo
Published on

ಕಲಬುರಗಿ : -2024-25ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಸಲು ಕಾಲಾವಧಿಯನ್ನು 2025ರ ಮಾರ್ಚ್ 31 ರವರೆಗೆ ವಿಸ್ತರಿಸಿ, ನೋಂದಣಿಯ ಜೊತೆಗೆ ಖರೀದಿ ಪ್ರಕ್ರಿಯೆಯನ್ನೂ ಸಹ ಕೈಗೊಳ್ಳಲು ಸರ್ಕಾರವು ಆದೇಶಿಸಿದೆ.

ಆದ್ದರಿಂದ ಜಿಲ್ಲೆಯ ರೈತ ಭಾಂದವರು ಇದರ ಸದುಪಯೋಗ ಪಡೆದುಕೊಂಡು ಇನ್ನೂ ಹೆಚ್ಚಿನ ರೈತರು ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಮಾರಾಟಕ್ಕಾಗಿ ತಮ್ಮ ಸಮಿಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಥವಾ ರೈತ ಉತ್ಪಾದಕ ಸಂಘಗಳಿಗೆ ಭೇಟಿ ನೀಡಿ ತಾವು ಬೆಳೆದ ತೊಗರಿ ಮಾರಾಟಕ್ಕೆ ನೊಂದಾಯಿಸಿಕೊಂಡು ತಾವು ಬೆಳೆದ ತೊಗರಿ ಉತ್ಪನ್ನವನ್ನು ಮಾರಾಟ ಮಾಡಬೇಕೆಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿಗೆ ಪ್ರತಿ ಕ್ವಿಂಟಾಲ್ ರೂ.7,550 ನಿಗದಿಪಡಿಸಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಪೆÇ್ರೀತ್ಸಾಹಧನ 450 ರೂ.ಪ್ರತಿ ಕ್ವಿಂಟಾಲಗೆ ಸೇರಿಸಿ ಒಟ್ಟು ಪ್ರತಿ ಕ್ವಿಂಟಾಲ್‍ಗೆ 8,000 ರೂ.ದರದಂತೆ ಪ್ರತಿ ಎಕರೆಗೆ 04 ಕ್ವಿಂಟಾಲ್ ಮತ್ತು ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಕಲಬುರಗಿ ಸಂಸ್ಥೆಗಳ ಮೂಲಕ ಜಿಲ್ಲೆಯಲ್ಲಿ ಒಟ್ಟು 196 ಖರೀದಿ ಕೇಂದ್ರಗಳನ್ನು ತೆರೆದು ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ತೊಗರಿಯನ್ನು ಖರೀದಿ ಮಾಡಲಾಗುತ್ತಿದೆ.

ಕಲಬುರಗಿ ಜಿಲ್ಲೆಯಲ್ಲಿ 2024-25ನೇ ಸಾಲಿಗೆ 6.27 ಲಕ್ಷ ಹೆಕ್ಟರ್ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದ್ದು, 50 ಲಕ್ಷ ಕ್ವಿಂಟಲ್ ಇಳುವರಿ ನಿರೀಕ್ಷಿಸಲಾಗಿದೆ. ದಿನಾಂಕ:18-03-2025ರ ಅಂತ್ಯಕ್ಕೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ಕಲಬುರಗಿ ಸಂಸ್ಥೆಯು 17,740 ರೈತರ ನೋಂದಣಿ ಹಾಗೂ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಕಲಬುರಗಿ ಸಂಸ್ಥೆಯು ಒಟ್ಟು 7,189 ರೈತರು ನೊಂದಣಿಯನ್ನು ಕೈಗೊಂಡಿದ್ದು, ಒಟ್ಟು ಜಿಲ್ಲೆಯಲ್ಲಿ 24,929 ರೈತರ ನೊಂದಣಿಯನ್ನು ಕೈಗೊಂಡು 5,713 ರೈತರಿಂದ ಒಟ್ಟು 84,844 ಕ್ವಿಂಟಲ್ ತೊಗರಿಯನ್ನು ಜಿಲ್ಲೆಯ ರೈತರಿಂದ ಖರೀದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net