10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್

tution
Published on

ಕುಶಾಲನಗರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಸೋಮವಾರಪೇಟೆ, ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕುಶಾಲನಗರದ ಮೂಕಾಂಬಿಕಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಹೆಚ್ಚುವರಿ ಭೋದನಾ ತರಬೇತಿ (ಟ್ಯೂಷನ್ ಕ್ಲಾಸ್) ಮೂಕಾಂಬಿಕಾ ಪ್ರೌಢಶಾಲಾ ಸಭಾಂಗಣದಲ್ಲಿ ಸೋಮವಾರ ಆರಂಭವಾಯಿತು.

ಮುಳ್ಳುಸೋಗೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಶಿವಾನಂದ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತಾನಾಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳು ಪ್ರತಿಭಾವಂತ ಮತ್ತು ಅಧ್ಯಾಯಶೀಲರಾಗಲು ಹಾಗೂ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಉತ್ತಮ ಅಂಕಗಳನ್ನು ಪಡೆಯಲು ಇಂತಹ ತರಗತಿಗಳ ಮೂಲಕ ಕಲಿಯುವ ವಿಷಯ ಚೇತರಿಕೆ ಮತ್ತು ಚೈತನ್ಯದ ಬೆಳವಣಿಗೆ ಸಹಕಾರಿಯಾಗುವುದು ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೂಡಿಗೆ ಪದವಿ ಪೂರ್ವ ಕಾಲೇಜು ಮಾಜಿ ಉಪಾಧ್ಯಕ್ಷ ಕೆ.ಕೆ. ನಾಗರಾಜಶೆಟ್ಟಿ ಮಾತಾನಾಡಿ ಇಂದಿನ ಪೈಪೋಟಿಯ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಅಧ್ಯಯನಶೀಲರಾಗಬೇಕು. ವಿದ್ಯಾರ್ಥಿಗಳು ಪ್ರಸ್ತುತ ವಿದ್ಯಮಾನದ ಜೊತೆಯಲ್ಲಿ ಪಠ್ಯ ಪುಸ್ತಕದ ವಿಷಯಗಳನ್ನು ಹೆಚ್ಚು ಅರಿತುಕೊಂಡು ಮುಂದಿನ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದುವ ಮೂಲಕ ಮುಂದಿನ ಉನ್ನತ ಶಿಕ್ಷಣಕ್ಕೆ ಸಾಗಲು ಪ್ರೌಢಶಾಲಾ ಶಿಕ್ಷಣ ಹಂತ ಪ್ರಮುಖ ಎಂದು ಹೇಳಿದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯ ಸುರೇಶ್ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಕುಶಾಲನಗರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಕೆ.ಟಿ ನಾಗರಾಜ್, ಕಾರ್ಯಕ್ರಮದ ಸಂಯೋಜಕಿ ಕವನ, ಶಾಲಾ ಶಿಕ್ಷಕರ ವೃಂದ, 10ನೇ ತರಗತಿಯ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net