ಆಳ್ವಾಸ್‌ಗೆ ಅವಳಿ ಪ್ರಶಸ್ತಿ

Mbd_Prize
Published on

ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಮೂಡುಬಿದಿರೆ ಹೋಲಿರೋಸರಿ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಮೂಡುಬಿದಿರೆಯಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು, ಮಹಾವೀರ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆಯಿತು.

ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜು, ಹೋಲಿರೋಸರಿ ಪದವಿ ಪೂರ್ವ ಕಾಲೇಜು ತಂಡವನ್ನು ಸೋಲಿಸಿ ಪ್ರಶಸ್ತಿ ಪಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net