ಕರ್ತವ್ಯ ಲೋಪ, ಪಿಡಿಒ ಅಮಾನತು

Published on

ಹುಬ್ಬಳ್ಳಿ: ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಡಿ.ಎಂ.ಕಾಲವಾಡ ಅವರನ್ನು ಅಮಾನತುಗೊಳಿಸಲಾಗಿದೆ.

ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕೆರೆಯಲ್ಲಿ ಅವಳಿ ಮಕ್ಕಳು ಬಿದ್ದು ಮೃತಪಟ್ಟಿದ್ದರು. ಇಲ್ಲಿ ಸಾರ್ವಜನಿಕರ ಸುರಕ್ಷತೆಗೆ ಸರಿಯಾದ ಕ್ರಮ ಕೈಗೊಳ್ಳದ ಮತ್ತು ಗ್ರಾಮದ ಮೂಲಸೌಕರ್ಯಗಳನ್ನು ಅಭಿವೃದ್ಧಿ ಪಡಿಸುವಲ್ಲಿ ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ ಪಿಡಿಒ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಪಂ ಸಿಇಒ ಭುವನೇಶ ಪಾಟೀಲ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಯರಿನಾರಾಯಣಪುರ ಗ್ರಾಮಕ್ಕೆ ಶನಿವಾರ ಭೇಟಿ ನೀಡಿದ್ದರು. ಅವರ ಸೂಚನೆ ಮೇರೆಗೆ ಅಮಾನತು ಕ್ರಮ ಜರುಗಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net