ಟ್ವಿಟ್ಟರ್‌ನಲ್ಲಿ ಅಶ್ಲೀಲ ಚಿತ್ರ ಪೋಸ್ಟ್ ಮಾಡಿದ ಯುವಕ ಬಂಧನ

mng--8 july shivaraj
Published on

ಮಂಗಳೂರು: ಟ್ವಿಟ್ಟರ್‌ನಲ್ಲಿ ನಕಲಿ ಖಾತೆ ಮೂಲಕ ತುಳುನಾಡಿನ ದೈವಾರಾಧನೆ ನಿಂದನೆ ಹಾಗೂ ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ ಬೆಂಗಳೂರಿನ ಯುವಕನನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.


ಬೆಂಗಳೂರು ಅಮೃತಹಳ್ಳಿ, ಜಕ್ಕೂರು ಮುಖ್ಯ ರಸ್ತೆ ನಿವಾಸಿ ಶಿವರಾಜ್ ಎಚ್.ಕೆ. (37) ಬಂಧಿತ. ಆರೋಪಿಯನ್ನು 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


ತುಳುನಾಡಿನ ದೈವಾರಾಧನೆ ಸಂರಕ್ಷಣಾ ಯುವ ವೇದಿಕೆಯವರು ಸೈಬರ್ ಇಕೋನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗ್ಡೆ ನೇತೃತ್ವದಲ್ಲಿ ಸೆನ್ ಠಾಣೆ ಇನ್‌ಸ್ಪೆಕ್ಟರ್ ಸತೀಶ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net