ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕಕ್ಕೆ ಹಣಕ್ಕೆ ಬೇಡಿಕೆ: ಇಬ್ಬರು ಆರೋಪಿಗಳು ವಶಕ್ಕೆ

Published on

ಮೈಸೂರು: ಋತುಮತಿಯಾದ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿ ಕನ್ಯಾಪೊರೆ ಕಳಚಲು 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಶೋಭಾ ಹಾಗೂ ಈಕೆಯ ಜೊತೆಗಿದ್ದ ತುಳಸಿಕುಮಾರ್ ಬಂಧಿತರು. ಈ ಮೂಲಕ ವೇಶ್ಯಾವಾಟಿಕೆಗೆ ತಳ್ಳಲು ಮುಂದಾಗಿದ್ದ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 12ರಿಂದ 13 ವರ್ಷದ ಅಪ್ರಾಪ್ತೆಯನ್ನು ರಕ್ಷಿಸಿ ಬಾಲಕಿಯರ ಬಾಲಮಂದಿರದಲ್ಲಿ ಆಶ್ರಯ ನೀಡಲಾಗಿದೆ.

ಋತುಮತಿಯಾದ ಬಾಲಕಿಯರ ಜತೆ ಮೊದಲ ಲೈಂಗಿಕ ಸಂಪರ್ಕ ಬೆಳೆಸಿದರೆ ಹಲವು ಮಾನಸಿಕ ರೋಗ ಗುಣವಾಗುತ್ತದೆ ಎಂಬ ಮೂಢನಂಬಿಕೆಯನ್ನ ಭಿತ್ತಿದ್ದ ಈ ತಂಡ ಕನ್ಯಾಪೊರೆ ಹೆಸರಿನಲ್ಲಿ ಅಪ್ರಾಪ್ತರನ್ನು ವೇಶ್ಯಾವಾಟಿಗೆ ತಳ್ಳುತ್ತಿತ್ತು ಎನ್ನಲಾಗಿದೆ.

ಜಾಲದ ಮೂಲಕ ಮಹಿಳೆಯನ್ನು ಸಂಪರ್ಕಿಸಿದಾಗ 12-13 ವರ್ಷದ ಬಾಲಕಿಯನ್ನ ವಾಟ್ಸ್‌ಆ್ಯಪ್ ವಿಡಿಯೋ ಮೂಲಕ ಕೆಲವು ಗ್ರಾಹಕರಿಗೆ ತೋರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ.

ಈ ಬಗ್ಗೆ ಬಂದ ಮಾಹಿತಿ ಮೇರೆಗೆ ಒಡನಾಡಿ ಸೇವ ಸಂಸ್ಥೆಯು ಮಕ್ಕಳ ಕಲ್ಯಾಣ ಸಮಿತಿ ಹಾಗೂ ವಿಜಯನಗರ ಠಾಣೆ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದರು.

ಯೋಜನೆಯಂತೆ ಮಹಿಳೆಯನ್ನು ಸಂಪರ್ಕಿಸಿದಾಗ ಆಕೆ ಭಾನುವಾರ ಬಾಲಕಿಯನ್ನು ಮೈಸೂರಿಗೆ ಕರೆ ತಂದಿದ್ದಾಳೆ. ಈ ವೇಳೆ ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಸತ್ಯ ಒಪ್ಪಿಕೊಂಡಿದ್ದಾರೆ. ಆದರೆ ಅಪ್ರಾಪ್ತೆ ಯಾರು? ಎಲ್ಲಿಂದ ಕರೆತರಲಾಗಿದೆ ಎನ್ನುವ ಮಾಹಿತಿ ನೀಡಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ವಿಜಯನಗರ ಠಾಣೆ ಪೊಲೀಸರು, ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net