ಅಪಘಾತದಲ್ಲಿ ಇಬ್ಬರು ಗಂಭೀರ

12.npk-2
Published on


ಕೊಡಗು : ನಾಪೋಕ್ಲು ಸಮೀಪದ ಬಲ್ಲಮಾವಟಿ ಗ್ರಾಮದಲ್ಲಿ ಭಾನುವಾರ ಸಂಜೆ ಬೈಕ್ ಮತ್ತೆ ಟಿಪ್ಪರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ನಾಪೋಕ್ಲುವಿನ ಹಳೆಯ ತಾಲೂಕಿನ ಭಗವತಿ ಕಲ್ಯಾಣ ಮಂಟಪದಲ್ಲಿ ವಿವಾಹ ಸಮಾರಂಭ ಪೂರೈಸಿ ಅಯ್ಯಂಗೇರಿಯತ್ತ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಬೈಕು, ಅಯ್ಯಂಗೇರಿ ಕಡೆಯಿಂದ ನಾಪೋಕ್ಲುವಿನತ್ತ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಅಯ್ಯಂಗೇರಿಯ ತೊತ್ತಿಯಂಡ ಸೋಮಯ್ಯ ಅವರ ಮಗ ಮುಕೇಶ್ (27) ಹಾಗೂ ಅವರ ಚಿಕ್ಕಪ್ಪ ತೊತ್ತಿಯಂಡ ರಾಕೇಶ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಲ್ಲಮಾವಟಿಯ ಪಡಿಯಾಣಿ ಜಂಕ್ಷನ್ ಬಳಿಯ ತಿರುವಿನಲ್ಲಿ ಎದುರಿನಿಂದ ಬಂದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದ್ದು ಇಬ್ಬರ ಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ನಾಪೋಕ್ಲುವಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಪೋಕ್ಲು ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡು ಕಾನೂನಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net