ಎಂಡಿಎಂಎ ಡ್ರಗ್ಸ್ ವಶ, ಇಬ್ಬರ ಬಂಧನ

DRUGS
Published on

ಕಾಸರಗೋಡು: ಬೇಕಲ ಠಾಣೆ ಪೊಲೀಸರು ಸೋಮವಾರ ನಡೆಸಿದ ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 13.6 ಗ್ರಾಂ ಎಂಡಿಎಂಎ ಮಾದಕ ದ್ರವ್ಯ ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ್ದಾರೆ.

ಜಿಲ್ಲೆಯ ಹೊಸದುರ್ಗ ತಾಲೂಕಿನ ಕೊಳಬೈಲ್ ನಿವಾಸಿ ನಿಜಾಮುದ್ದೀನ್ ಎಂಬಾತನನ್ನು ಬಂಧಿಸಿ 10 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಇನ್ನೊಂದೆಡೆ, ಉದುಮದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕಾಸರಗೋಡು ತಳಂಗರೆ ನಿವಾಸಿ ಮಹಮ್ಮದ್ ಸಮ್ಮಾಸ್ ಎಂಬಾತನಿಂದ 3.6 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net