ಗಾಂಜಾ ಸೇವಿಸುತ್ತಿದ್ದ ಇಬ್ಬರ ಬಂಧನ

Arrest Kaidhi
Published on

ಭಟ್ಕಳ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ಪ್ರತ್ಯೇಕ ಪ್ರಕರಣದಲ್ಲಿ ಮುರ್ಡೆಶ್ವರ ಠಾಣೆ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಮುರ್ಡೆಶ್ವರದ ಎಡ ಬದಿಯ ಬೀಚ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾದಕ ವಸ್ತು ಸೇವನೆ ಮಾಡಿದ ಅನುಮಾನದ ಮೇಲೆ ಬೆಂಗಳೂರು ಕಾಮಾಕ್ಷಿ ಪಾಳ್ಯದ ರಂಗನಾಥಪುರ ಮೂಲದ ಆರೋಪಿ ರಘು ಎಂ. ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮುರ್ಡೆಶ್ವರದ ಬಸ್ತಿಮಕ್ಕಿ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾದಕ ವಸ್ತುವನ್ನು ಸೇವನೆ ಮಾಡಿದ ಅನುಮಾನದ ಮೇಲೆ ಬೆಂಗಳೂರು ಮೂಲದ ಅಮ್ಮ ಮಹೇಶ್ವರಿ ದೇವಸ್ಥಾನ ರಸ್ತೆಯ ಆರ್. ಸಂತೋಷ ರಾಮು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇವರಿಬ್ಬರನ್ನು ಮುರ್ಡೆಶ್ವರ ಠಾಣೆಯ ಪಿಎಸ್​ಐ ಹಣಮಂತ ಬಿರಾದಾರ ಮಾರ್ಗದರ್ಶನದಲ್ಲಿ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net