

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ರಾಜ ಕಾಲನಿ ಹಾಗೂ ಹಳೇಹುಬ್ಬಳ್ಳಿ ಕಾರವಾರ ರಸ್ತೆ ಕೆಇಬಿ ಹತ್ತಿರ ಪ್ರತ್ಯೇಕವಾಗಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದು, ನಗದು ಮತ್ತು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ನಡೆಯುತ್ತಿದ್ದ ಐಪಿಎಲ್ ಕ್ರಿಕೆಟ್ ಪಂದ್ಯದ ವೇಳೆ ಬೆಟ್ಟಿಂಗ್‌ಆಡುತ್ತಿದ್ದಾಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇನ್ನೊಬ್ಬ ತಲೆಮರೆಸಿಕೊಂಡಿದ್ದಾನೆ. ಬೆಂಡಿಗೇರಿ ಹಾಗೂ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.