ಜಿಂಕೆ ಬೇಟಿಯಾಡಿದ್ದ ಇಬ್ಬರು ಸೆರೆ

 ಹನೂರು ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ಜಿಂಕೆ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸಿದರು.
ಹನೂರು ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ಜಿಂಕೆ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸಿದರು.
Published on

ಹನೂರು: ತಾಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ಶನಿವಾರ ಜಿಂಕೆಯನ್ನು ಬೇಟೆಯಾಡಿ ಮಾಂಸವನ್ನು ಹಂಚಿಕೊಳ್ಳುತ್ತಿದ್ದ ವೇಳೆ ರಾಮಾಪುರ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಸಪ್ಪನದೊಡ್ಡಿ ಗ್ರಾಮದ ಗೋವಿಂದ ಹಾಗೂ ಗಂಗನದೊಡ್ಡಿ ಗ್ರಾಮದ ಕೃಷ್ಣ ಬಂಧಿತ ಆರೋಪಿಗಳು. ಬಂಧಿತರಿಬ್ಬರು ಅರಣ್ಯ ಪ್ರದೇಶದಲ್ಲಿ ನಾಡ ಬಂದೂಕಿನಿಂದ ಜಿಂಕೆಯನ್ನು ಬೇಟೆಯಾಡಿದ್ದು, ಅದನ್ನು ಬಸಪ್ಪನದೊಡ್ಡಿ ಗೋವಿಂದ ಅವರ ಮನೆಯ ಬಳಿ ತಂದು ಮಾಂಸವನ್ನು ಹಂಚಿಕೊಳ್ಳುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ಸೋಮೇಗೌಡ ಅವರ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ಸಂತೋಷ್ ಕಶ್ಯಪ್ ನೇತೃತ್ವದಲ್ಲಿ ಅಪರಾಧ ವಿಭಾಗದ ಎಸೈ ಲೋಕೇಶ್ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ಮಾಂಸವನ್ನು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿಯಲ್ಲಿ ಮುಖ್ಯ ಪೇದೆಗಳಾದ ಸಿದ್ದೇಶ್, ನಾಗೇಂದ್ರ, ಗಿರೀಶ್, ಪೇದೆಗಳಾದ ಲಿಯಾಖತ್ ಆಲಿಖಾನ್ ಬಿರಾದಾರ, ಪರಮೇಶ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net