

ಮಂಗಳೂರು: ದಂಬೆಲ್ ನದಿ ಕಿನಾರೆ ರಸ್ತೆಯ ಲ್ಗುಣಿ ಸೇತುವೆ ಬಳಿ ಗಾಂಜಾ ಹೊಂದಿದ್ದ ಇಬ್ಬರು ಯುವಕರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಪೂರ್ಣಿಯಾ ಹರಿಪುರ್ ಗ್ರಾಮದ ನಿವಾಸಿ ಪ್ರಸ್ತುತ ಕೂಳೂರು ರಾಯಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕೃಷ್ಣ ಕುಮಾರ್(20), ಗದಗ ಜಿಲ್ಲೆ ಶಿರಹಟ್ಟಿ ತಾಲೂಕು ಯಳವತ್ತಿ ಗ್ರಾಮ ನಿವಾಸಿ, ಪಡೀಲ್ ಕೊಡಕ್ಕಲ್‌ನಲ್ಲಿ ವಾಸವಾಗಿರುವ ಬಸಯ್ಯ ಶಂಕರಯ್ಯ ಮಠಪತಿ(23) ಬಂಧಿತರು.
ಯುವಕರು ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದ್ದು, ಪೊಲೀಸರು ಬೆನ್ನಟ್ಟಿ ಹಿಡಿದಾಗ ಚೀಲದಲ್ಲಿ ಗಾಂಜಾ ಪತ್ತೆಯಾಗಿದೆ. ವಿಚಾರಣೆಗೆ ಒಳಪಡಿಸಿದಾಗ ಗಾಂಜಾವನ್ನು 3 ತಿಂಗಳ ಹಿಂದೆ ಬಿಹಾರದ ವ್ಯಕ್ತಿಯೊಬ್ಬರಿಂದ ಖರೀದಿಸಿದ್ದು, ಗ್ರಾಹಕರಿಗೆ ಮಾರಾಟ ಮಾಡಲು ಉದ್ದೇಶಿಸಿದ್ದಾಗಿ ತಿಳಿಸಿದ್ದಾರೆ. ಆರೋಪಿಗಳಿಂದ 20,200 ರೂ. ಮೌಲ್ಯದ 1.364 ಕೆ.ಜಿ. ಗಾಂಜಾ, 2 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉಪ್ಪಿನಂಗಡಿ ಪರಿಸರದಲ್ಲಿ ಅವ್ಯಾಹತವಾಗಿ ನಡೆಯುತ್ತಿದ್ದ ಮಾದಕದ್ರವ್ಯ ಮಾರಾಟ ಜಾಲದ ಮೂಲ ಪತ್ತೆ ಹಚ್ಚಿದ ಉಪ್ಪಿನಂಗಡಿ ಪೊಲೀಸರು ಮಠ ಹಿರ್ತಡ್ಕ ಮನೆ ನಿವಾಸಿ ರಜಾಕ್(43) ಎಂಬಾತನನ್ನು ಬಂಧಿಸಲಾಗಿದೆ. ಎಂಡಿಎಂಎ ಅನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪಿ ರಜಾಕ್ ತಾನೂ ಮಾದಕದ್ರವ್ಯ ಸೇವಿಸಿದ್ದಲ್ಲದೆ, ಉಪ್ಪಿನಂಗಡಿ ಮತ್ತು ಹಿರೇಬಂಡಾಡಿ ಪರಿಸರದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಹೊಂದಿದ್ದ 20 ಸಾವಿರ ರೂ. ಮೌಲ್ಯದ 12.35 ಗ್ರಾಂ ತೂಕದ ಮಾದಕದ್ರವ್ಯ ಜತೆಗೆ 2 ಮೊಬೈಲ್ ಫೋನ್, ಕಾರು ವಶಪಡಿಸಿಕೊಳ್ಳಲಾಗಿದೆ.
ಸಿಗರೇಟ್‌ನಲ್ಲಿ ಗಾಂಜಾ ಬೆರೆಸಿ ಸೇವಿಸುತ್ತಿದ್ದ ಕಾಸರಗೋಡು ಜಿಲ್ಲೆ ಮುಳಿಯಾರ್ ಪೊವ್ವಲ್ ನಿವಾಸಿ ಮೊಹಮ್ಮದ್ ಾಸಿಲ್ ಪಿರೋಜ್ ಪಿ.ಸಿ.(23) ಎಂಬಾತನನ್ನು ಉರ್ವ ಠಾಣೆ ಪೊಲೀಸರು ಬಿಜೈ ಕಾಪಿಕಾಡ್‌ನಲ್ಲಿ ಬಂಧಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಸಿಗರೇಟ್ ಸೇದುತ್ತಿದ್ದ ಆತ ಪೊಲೀಸರು ಬರುತ್ತಿದ್ದಂತೆ ಸಿಗರೇಟ್ ಅನ್ನು ಚರಂಡಿಗೆ ಎಸೆದಿದ್ದಾನೆ. ವಿಚಾರಿಸಿದಾಗ ಬಾಯಿಯಲ್ಲಿ ಮಾದಕ ವಸ್ತು ಸೇವನೆಯ ಘಾಟು ಬಂದಿದೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.