ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Published on

ಸುಂಟಿಕೊಪ್ಪ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ.

ಕುಶಾಲನಗರ ಸಮೀಪದ ಮದಲಾಪುರ ಗ್ರಾಮದ ಅಜರುದ್ದೀನ್ (29) ಮತ್ತು ಗುಮ್ಮನಕೊಲ್ಲಿ ನಿವಾಸಿ ಮೊಹಮದ್ ಮುಸ್ತಾಕ್ (29) ಬಂಧಿತ ಆರೋಪಿಗಳು. ಇವರಿಂದ 13 ಗ್ರಾಂ ಮಾದಕ ವಸ್ತು ಎಂಡಿಎಂಎ ಮತ್ತು ಒಂದು ದ್ವಿಚಕ್ರ ವಾಹನ ಹಾಗೂ ಮೂರು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಗುಮ್ಮನಕೊಲ್ಲಿಯಲ್ಲಿ ಎಂಡಿಎಂಎ ಅನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಳಿವು ದೊರೆತ ಹಿನ್ನೆಲೆಯಲ್ಲಿ ಡಿಎಸ್‌ಪಿಡಿವಿ ಗಂಗಾಧರಪ್ಪ, ಕುಶಾಲನಗರ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಗೀತಾ ಹಾಗೂ ಸಿಬ್ಬಂದಿ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net