ವಿಧವೆಯ ಮೇಲೆ ಅತ್ಯಾಚಾರ; ಆರೋಪಿಗಳಿಬ್ಬರ ಬಂಧನ..

rape
ಸಾಂದರ್ಭಿಕ ಚಿತ್ರ
Published on

ಬೆಳಗಾವಿ: ವಿಧವೆಯ ಮೇಲೆ ಅತ್ಯಾಚಾರ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇಲ್ಲಿನ ಅನಗೋಳದಲ್ಲಿ ಓರ್ವ ಮಹಿಳೆಯ ಮೇಲೆ ಇಬ್ಬರು ಯುವಕರು ಸೇರಿಕೊಂಡು ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಮಾರ್ಕೆಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಸಂತ್ರಸ್ತೆಯ ದೂರಿನ ಮೇರೆಗೆ ಬೈಲಹೊಂಗಲ ತಾಲೂಕಿನ ನೇಸರಿಗಿ ಗ್ರಾಮದ ಯಲ್ಲಪ್ಪ ನಾಯಿಕ (25), ದುರ್ಗೇಶ (24) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಮಹಿಳೆ ಮೂಲತಃ ಬೆಳಗಾವಿ ನಗರದವಳಾಗಿದ್ದಾಳೆ. ಎರಡು ವರ್ಷದ ಹಿಂದೆ ಗಂಡ ತೀರಿಕೊಂಡಿದ್ದನು.

ಆರೋಪಿಗಳ ಪೈಕಿ ಒಬ್ಬನ ಜತೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು. ಮೊಬೈಲ್​ಫೋನ್​ನಲ್ಲಿ ಚಾಟಿಂಗ್ ಮಾಡುತ್ತಿದ್ದಳು. ಭಾನುವಾರ ಇಬ್ಬರು ಗೆಳೆಯರು ಸೇರಿಕೊಂಡು ಈ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ಸೋಮವಾರ ದೂರು ನೀಡಿದ್ದಾಳೆ. ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ ಎಂದು ಮಾರ್ಕೆಟ್ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net