ಬೈಕ್‌ಗೆ ಬೈಕ್ ಡಿಕ್ಕಿ, ಓರ್ವ ಸವಾರ ಸಾವು

Crime Logo
Published on

ಬ್ಯಾಡಗಿ: ಬೈಕ್‌ಗೆ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಪಟ್ಟಣದ ರಟ್ಟಿಹಳ್ಳಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.
ತಾಲೂಕಿನ ಬಿಸಲಹಳ್ಳಿ ಗ್ರಾಮದ ನಿಂಗಪ್ಪ ಹನುಮಂತಪ್ಪ ಮಾಳಮ್ಮನವರ (56) ಮೃತ ಬೈಕ್ ಸವಾರ.
ಈತ ಬ್ಯಾಡಗಿಯಿಂದ ಬಿಸಲಹಳ್ಳಿಗೆ ಬರುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್‌ನ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡ ನಿಂಗಪ್ಪನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net