ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

sucide
Published on

ಬೈಲಹೊಂಗಲ: ತಾಲೂಕಿನ ವಕ್ಕುಂದ ಗ್ರಾಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಲಿತಾಂಶ ಬರುವ ಮುನ್ನವೇ ಭಯಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಮಂಗಳವಾರ ಮೃತಪಟ್ಟಿದ್ದಾಳೆ.

ತ್ರಿವೇಣಿ ಸುರೇಶ ಗಣಾಚಾರಿ (18) ಮೃತ ವಿದ್ಯಾರ್ಥಿನಿ. ಜು. 11ರಂದು ವಿಷ ಸೇವಿಸಿದ್ದ ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿ ಶೇ. 55ರಷ್ಟು ಅಂಕ ಗಳಿಸಿದ್ದಾಳೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net