ಹಿರೋಡೆ ಕೆರೆಯಲ್ಲಿ ಇಬ್ಬರ ಶವ ಪತ್ತೆ

16-pnp 4
ಪಾಂಡವಪುರ ಹಿರೋಡೆ ಕೆರೆ ದಡದಲ್ಲಿ ಪತ್ತೆಯಾಗಿರುವ ಅಪರಿಚಿತ ವ್ಯಕ್ತಿಗಳ ಶವ.
Published on

ಪಾಂಡವಪುರ: ಪಟ್ಟಣದ ಹಿರೋಡೆ ಕೆರೆ ದಡದಲ್ಲಿ ತಬ್ಬಿಕೊಂಡಿರುವ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಮತ್ತು ಪುರುಷನ ಶವ ಶುಕ್ರವಾರ ಪತ್ತೆಯಾಗಿದೆ.

ಮೃತರು ಸುಮಾರು 50 ವರ್ಷ ಮೇಲ್ಪಟ್ಟವರಾಗಿದ್ದು, ಹೂಳಿನಲ್ಲಿ ಶವ ಪತ್ತೆಯಾಗಿದೆ. ಎರಡ್ಮೂರು ದಿನಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ವಾರಸುದಾರರ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ದಳದ ಸಹಾಯದೊಂದಿಗೆ ಶವಗಳನ್ನು ಮೇಲೆತ್ತಿ ಪಟ್ಟಣದ ಉಪವಿಭಾಗೀಯ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರ ಬಗ್ಗೆ ಮಾಹಿತಿ ತಿಳಿದವರು ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net