ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

Two boy
Published on

ಬಾಗಲಕೋಟೆ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ.

ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ.

ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net