ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣ; ಮುಗಿಲು ಮುಟ್ಟಿತು ಹೆತ್ತವರ ಆಕ್ರಂದನ

WhatsApp Image 2024-05-20 at 12.00.23 PM
Published on

ಬಾಗಲಕೋಟೆ: ಕಳೆದ ಕೆಲವು ದಿನಗಳಿಂದ ಕೆರೆ, ನದಿಯಲ್ಲಿ ಈಜಲು ಹೋದ ಬಾಲಕರು ಮೃತಪಟ್ಟ ಘಟನೆಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು, ಇದೀಗ ಮತ್ತೊಂದು ಇಂತಹದ್ದೇ ಪ್ರಕರಣ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ವರದಿಯಾಗಿದೆ. ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಬನಹಟ್ಟಿ ಪಟ್ಟಣದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತ ದುರ್ದೈವಿಗಳನ್ನು ಸಂಜಯ್ ತಳವಾರ್ (12), ಸಮರ್ಥ್ ತಳವಾರ್ (12) ಎಂದು ಗುರುತಿಸಲಾಗಿದೆ. ಬೆಳಗ್ಗೆ ಕೆರೆಗೆ ಈಜಲು ಹೋಗಿದ್ದ ಇಬ್ಬರು ಬಾಲಕರು, ನೀರು ಹೆಚ್ಚಿರುವುದನ್ನು ಗಮನಿಸದೆ, ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಬನಹಟ್ಟಿ ಕೆರೆಯು ತುಂಬಿ ಹರಿಯುತ್ತಿತ್ತು. ಈ ವೇಳೆ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡ ಬಾಲಕರ ಶವವನ್ನು ಸ್ಥಳೀಯ ಈಜುಗಾರರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net