ಗೃಹಲಕ್ಷ್ಮಿ ನೋಂದಣಿಗೆ ಎರಡು ಕೇಂದ್ರ

Gruhalakshmi Registration center opened in Mundgod town municipal corporation
Published on

ಮುಂಡಗೋಡ: ಗೃಹಲಕ್ಷ್ಮಿ ಯೋಜನೆಯ ಲೋಕಾರ್ಪಣೆ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿಯಲ್ಲಿ ಫಲಾನುಭವಿಗಳ ನೋಂದಣಿಗಾಗಿ ಎರಡು ಕೇಂದ್ರ ತೆರೆಯಲಾಗಿದೆ.

ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ವಾರ್ಡ್ ಕಚೇರಿಗಳಲ್ಲಿ ನೊಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಆದೇಶದಂತೆ ಪಟ್ಟಣ ಪಂಚಾಯಿತಿಯಲ್ಲಿ ಎರಡು ನೊಂದಣಿ ಕೇಂದ್ರ ತೆರೆಯಲಾಗಿದೆ.

ಇದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ಅನುಕೂಲವಾಗಲಿದೆ.

ಜಿಲ್ಲಾಧಿಕಾರಿಗಳ ಆದೇಶದಂತೆ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಎರಡು ನೊಂದಣಿ ಕೇಂದ್ರ ತೆರೆಯಲಾಗಿದೆ. ಇದು ಅಧಿಕೃತವಾಗಿ ಲೋಕಾರ್ಪಣೆಯಾದ ಮೇಲೆ ಸಾರ್ವಜನಿಕರ ಸೇವೆಗೆ ಲಭ್ಯವಿರುತ್ತದೆ.| ಚಂದ್ರಶೇಖರ ಬಿ., ಮುಖ್ಯಾಧಿಕಾರಿ. ಪಪಂ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net