ಕ್ವಾರಿಯಲ್ಲಿ ಈಜಲು ಹೋದ ಮಕ್ಕಳ ಸಾವು ; ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಸಚಿವ ಎಂಟಿಬಿ ನಾಗರಾಜ್ ಭೇಟಿ

mtb NEW
Published on

ಹೊಸಕೋಟೆ: ಅನುಗೊಂಡನಹಳ್ಳಿ ಹೋಬಳಿಯ ದೊಡ್ಡದುನ್ನಸಂದ್ರ ಗ್ರಾಮದ ಕಲ್ಲು ಕ್ವಾರಿಯಲ್ಲಿ ಸಂಗ್ರಹವಾಗಿದ್ದ ನೀರಿನಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಶನಿವಾರ ಸಂಜೆ ಮುಳುಗಿ ಮೃತಪಟ್ಟಿದ್ದಾರೆ.

ಗ್ರಾಮದ ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳಾದ ನಿವಾಸ್ (14) ಹಾಗೂ ಇರ್ಷದ್ (14) ಮೃತರು. ಶನಿವಾರ ಶಾಲೆ ಮುಗಿದ ನಂತರ ಸಂಜೆ ಕ್ವಾರಿಯಲ್ಲಿ ಈಜಲು ಹೋಗಿದ್ದಾಗ ಆಯ ತಪ್ಪಿ ಬಿದ್ದು ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರು ಮತ್ತು ಅಗ್ನಿಶಾಮಕದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಬಂದ ಸಿಬ್ಬಂದಿ ಹಾಗೂ ಎಸ್‌ಡಿಆರ್‌ಎ್ ತಂಡದ ಸಹಾಯದಿಂದ ಶವಗಳನ್ನು ಹೊರತೆಗೆಯಲು ಪ್ರಯತ್ನಿಸಲಾಯಿತು. ಕತ್ತಲಾಗಿದ್ದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು. ಭಾನುವಾರ ಬೆಳಗ್ಗೆ ಶವಗಳನ್ನು ಹೊರತೆಗೆಯಲಾಯಿತು. ತಹಸೀಲ್ದಾರ್ ಕೆ.ಎಂ.ಮಹೇಶ್‌ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಅನುಗೊಂಡನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net