ಮನೆ ಮೇಲೇ ಕುಸಿದ ಗುಡ್ಡ, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿ ಸಾವು..

Child
Published on

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಗುಡ್ಡವೊಂದು ಮನೆಯ ಮೇಲೇ ಕುಸಿದು, ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿ, ಸಾವಿಗೀಡಾದ ಘಟನೆಯೊಂದು ನಡೆದಿದೆ.

ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿ ಎಂಬಲ್ಲಿ ಕುಶಾಲಪ್ಪ ಎಂಬವರ ಮನೆ ಮೇಲೆ ಗುಡ್ಡ ಕುಸಿದಿದ್ದು, ಶ್ರುತಿ (11), ಗಾನ (6) ಎಂಬ ಮಕ್ಕಳಿಬ್ಬರು ಮಣ್ಣಿನಡಿ ಸಿಲುಕಿದ್ದರು. ಗುಡ್ಡ ಕುಸಿತದಿಂದ ಮನೆ ನೆಲಸಮವಾಗಿದೆ.

ಸ್ಥಳಕ್ಕೆ ಪೊಲೀಸರು ಹಾಗೂ ಸ್ಥಳೀಯಾಡಳಿತದವರು ದೌಡಾಯಿಸಿದ್ದು, ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ, ಮಕ್ಕಳನ್ನು ರಕ್ಷಿಸುವ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗಲಿಲ್ಲ. ಮಕ್ಕಳಿಬ್ಬರೂ ಸಾವಿಗೀಡಾಗಿದ್ದಾರೆ. ಮಕ್ಕಳ ಮೃತದೇಹವನ್ನು ರಕ್ಷಣಾ ತಂಡ ಹೊರ ತೆಗೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net