ಮೈಸೂರಿನಲ್ಲಿ ಎರಡು ದಿನಗಳು ವಿದ್ಯಾರ್ಥಿ ಹಬ್ಬ

Published on

ಮೈಸೂರು: ವಿದ್ಯಾರ್ಥಿ ಕ್ರಿಯಾ ಸಮಿತಿಯಿಂದ ನಗರದ ಕಲಾಮಂದಿರದಲ್ಲಿ ಏ.1 ಮತ್ತು 2ರಂದು ವಿದ್ಯಾರ್ಥಿ ಹಬ್ಬ ಆಯೋಜಿಸಲಾಗಿದೆ ಎಂದು ಸಮಿತಿ ಉಪಾಧ್ಯಕ್ಷ ಕಿರಣ್ ತಿಳಿಸಿದರು.

ವಿದ್ಯಾರ್ಥಿ ಹಬ್ಬದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ರಾಜ್ಯದ ಎಲ್ಲ ಕಾಲೇಜುಗಳ ಪದವಿ ವಿದ್ಯಾರ್ಥಿಗಳು ತಮ್ಮ ಪ್ರಾಂಶುಪಾಲರ ಅನುಮತಿ ಪತ್ರದೊಂದಿಗೆ ಸ್ಪರ್ಧಿಸಬಹುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸ್ಪರ್ಧಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಮಾಡಲಾಗುವುದು. ಹಾಗಾಗಿ, ಆಸಕ್ತ ಕಾಲೇಜು ವಿದ್ಯಾರ್ಥಿಗಳು ಮಾ.28ರೊಳಗೆ ಮೊ.8660141651 ಸಂಪರ್ಕಿಸಬಹುದು ಎಂದು ಮನವಿ ಮಾಡಿದರು.

ಸಮಿತಿ ಸದಸ್ಯರಾದ ಲಿಖಿತ್, ಧ್ರುವ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net