ನಗರ, ಗ್ರಾಮೀಣ ಭಾಗದ ಶಾಲೆಗಳಿಗೆ ಎರಡು ದಿನ ರಜೆ

IMG20241225155857.jpg
Published on

ಬೆಳಗಾವಿ: ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೆಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶೈಕ್ಷಣಿಕ ವಲಯದ (ನಗರ ಮತ್ತು ಗ್ರಾಮೀಣ) ಸಕಾರ್ರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿ.26 ಹಾಗೂ 27 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಅಂಗನವಾಡಿ ಕೇಂದ್ರಗಳಿಗೂ ರಜೆ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net