ಹುಬ್ಬಳ್ಳಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವತಿಯಿಂದ 11ನೇ ಕನ್ನಡ ಕಲ್ಪಿತ ನ್ಯಾಯಾಲಯ ಸ್ಪರ್ಧೆಯನ್ನು ಮೇ 17 ಮತ್ತು 18 ರಂದು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
17ರಂದು ಬೆಳಗ್ಗೆ 10ಗಂಟೆಗೆ ವಿಶ್ವವಿದ್ಯಾಲಯದ ಕಾನೂನು ಶಾಲೆಯ ಸಭಾಂಗಣದಲ್ಲಿ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ವೆಂಕಟೇಶ ನಾಯ್ಕ ಟಿ. ಉದ್ಘಾಟಿಸುವರು. ವಿವಿ ಕುಲಪತಿ ಪೊ›. ಸಿ. ಬಸವರಾಜು ಅಧ್ಯಕ್ಷತೆ ವಹಿಸುವರು.
18ರಂದು ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶ ರವಿ ಹೊಸಮನಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬೂದಿಹಾಳ ಆರ್.ಬಿ., ಧಾರವಾಡ ಜಿಲ್ಲಾ ನ್ಯಾಯಾಲಯದ ಹಿರಿಯ ವಕೀಲ ಬಸವಪ್ರಭು ಹೊಸಕೇರಿ ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು. ವಿವಿ ಕುಲಪತಿ ಪೊ›. ಸಿ. ಬಸವರಾಜು ಅಧ್ಯಕ್ಷತೆ ವಹಿಸುವರು. ವಿವಿ ಆಡಳಿತಾಂಗ ಕುಲಸಚಿವೆ ಗೀತಾ ಕೌಲಗಿ, ಪರೀಕ್ಷಾಂಗದ ಕುಲಸಚಿವ ಪೊ›. ರತ್ನಾ ಭರಮಗೌಡರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.