ಚಿತ್ರದುರ್ಗ; ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದ ಇಬ್ಬರು ಸಾವು

Krushi Honda Death
Published on

ಚಿತ್ರದುರ್ಗ: ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ವ್ಯಕ್ತಿಗಳು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶ್ರೀನಿವಾಸ್ (48) ಹಾಗೂ ನಾಗರಾಜ್​ (35) ಎಂದು ಗುರುತಿಸಲಾಗಿದ್ದು. ಇವರು ನೆಲ್ಲಿಕಟ್ಟೆ ಗ್ರಾಮದ ನಿವಾಸಿಗಳೆಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇವರಿಬ್ಬರ ಸಾವಿನ ಬಗ್ಗೆ ಅನುಮಾನ ಮೂಡಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net