VIDEO| ಐದು ಪಲ್ಟಿ ಹೊಡೆದ ಕಾರು: ಇಬ್ಬರ ದುರ್ಮರಣ, ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ!

Car
Published on

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿ ಸ್ಥಳದ್ಲಲೇ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿತ್ತು. ಅತಿವೇಗವಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲಿ ಐದು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ.

ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net