ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ...

Accident
Published on

ತುಮಕೂರು: ರಾಜ್ಯದಲ್ಲಿ ದಿನವೂ ಒಂದಲ್ಲ ಒಂದು ಕಡೆ ಭೀಕರ ಅಪಘಾತ ಸಂಭವಿಸುತ್ತಿದ್ದು, ಸಾವು-ನೋವುಗಳೂ ಆಗುತ್ತಿವೆ. ಇಂದು ಕೂಡ ಒಂದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಮತ್ತು ಬ್ರೆಝಾ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಸ್ವಿಫ್ಟ್ ಕಾರಿನಲ್ಲಿದ್ದ ಸಿ.ಎಸ್​.ಪುರ ಮೂಲದ ರಾಜೇಶ್​ ಹಾಗೂ ಬೆಲವತ್ತ ಗ್ರಾಮದ ವೆಂಕಟಾಚಲ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬ್ರೆಝಾದಲ್ಲಿದ್ದ ಒಬ್ಬ ವ್ಯಕ್ತಿಯ ಕಾಲು ಮುರಿತಕ್ಕೊಳಗಾಗಿದೆ. ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ಇತರ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net