

ಬೆಳಗಾವಿ: ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ನೀರು ಪಾಲಾಗಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಘಟಪ್ರಭಾ ನದಿಯಲ್ಲಿ ಭಾನುವಾರ ನಡೆದಿದ್ದು, ಇಬ್ಬರು ಮಕ್ಕಳ ಮೃತದೇಹ ಸೋಮವಾರ ಸಂಜೆ ಪತ್ತೆಯಾಗಿದೆ. ಗ್ರಾಮದ ಲಕ್ಷ್ಮಣರಾಮ ಅಂಬಲಿ(49), ಪುತ್ರರಾದ ರಮೇಶ ಅಂಬಲಿ(14), ಯಲ್ಲಪ್ಪ ಅಂಬಲಿ(12) ನೀರಿನಲ್ಲಿ ಮುಳುಗಿರುವವರು. ಭಾನುವಾರ ಸಂಜೆ ಮೀನಿನ ಬಲೆ ಹಾಕಲು ನದಿಗೆ ಇಳಿದ ವೇಳೆ ಅವಘಡ ಸಂಭವಿಸಿತ್ತು.
ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸೋಮವಾರ ಬೆಳಗ್ಗೆಯಿಂದ ಮೂವರಿಗಾಗಿ ಎನ್ ಡಿಆರ್ ಎಫ್ ತಂಡದಿಂದ ಶೋಧಕಾರ್ಯ ನಡೆಸಿ ಮೂವರಲ್ಲಿ ಇಬ್ಬರು ಮಕ್ಕಳ ಮೃತದೇಹವನ್ನು ಪತ್ತೆ ಮಾಡಲಾಗಿದೆ. ತಂದೆಯ ಶವಕ್ಕಾಗಿ ಹುಡುಕಾಟ ನಡೆದಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.