ಚಿರತೆ ದಾಳಿಗೆ ಎರಡು ಮೇಕೆ ಬಲಿ

lepord
Published on

ಹಲಗೂರು: ಸಮೀಪದ ಲಿಂಗಪಟ್ಟಣ ಗ್ರಾಮದಲ್ಲಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಮೇಕೆಗಳ ಮೇಲೆ ಮಂಗಳವಾರ ಮುಂಜಾನೆ ಚಿರತೆ ದಾಳಿ ಮಾಡಿ ಎರಡು ಮೇಕೆಗಳನ್ನು ಬಲಿ ಪಡೆದಿದೆ.

ಗ್ರಾಮದ ರೈತ ರಮೇಶ್ ಅವರು ಮೇಕೆ ಮತ್ತು ಹಸು ಸಾಕಣೆ ಮಾಡಿಕೊಂಡು ಜೀವನ ನಡೆಸುತ್ತಿದ್ದು, ತಮ್ಮ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕುರಿಗಳ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿ ಎರಡು ಮೇಕೆಗಳನ್ನು ತಿಂದು ಹಾಕಿದೆ. ಪಕ್ಕದಲ್ಲಿ ಕಟ್ಟಿದ್ದ ಮೇಕೆಗಳ ಮೇಲೂ ದಾಳಿ ಮಾಡಿ ಗಾಯಗೊಳಿಸಿದೆ. ಕುರಿ, ಮೇಕೆಗಳ ಚೀರಾಟ ಕೇಳಿದ ಮನೆಯವರು ಹೊರಗೆ ಬಂದು ನೋಡಿದಾಗ ಚಿರತೆ ಮೇಕೆಗಳನ್ನು ಬಿಟ್ಟು ಓಡಿ ಹೋಗಿದೆ.

ವಿಷಯ ತಿಳಿದ ಅರಣ್ಯ ಇಲಾಖೆ ಗಸ್ತು ಅರಣ್ಯ ಪಾಲಕ ಪಿ.ಎಂ.ಕೃಷ್ಣ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net