ಕಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರಿಗೆ ಗಾಯ

09SPT3
Published on

ಸೋಮವಾರಪೇಟೆ: ಕುಸೂಬೂರು ಕೆರೆ ಸಮೀಪದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಮಾರುತಿ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕಾರು ಚಾಲಕ ಗುಡ್ಡೆಹೊಸೂರು ಗೌತಮ್ ಹಾಗೂ ಕುಶಾಲನಗರ ಖಾಸಗಿ ಶಾಲೆಯ ಸಿಬ್ಬಂದಿ ರೆಜಿನಾ ಗಾಯಗೊಂಡವರು.

ಸೋಮವಾರಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹಾಗೂ ಕುಶಾಲನಗರದಿಂದ ಸೋಮವಾರಪೇಟೆಗೆ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಗಾಯಳುಗಳಿಗೆ ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಈ ಸಂಬಂಧ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net